Monday, December 23, 2024
Homeಜಿಲ್ಲೆವಿಶ್ವಕರ್ಮ ಸಮಾಜ ಜಗತ್ತಿಗೆ ನೀಡಿರುವ ಕೊಡಗೆ ಅಪಾರ : ಶಾಸಕ ಬಿ.ಎನ್ ರವಿಕುಮಾರ್ ಬಣ್ಣನೆ 

ವಿಶ್ವಕರ್ಮ ಸಮಾಜ ಜಗತ್ತಿಗೆ ನೀಡಿರುವ ಕೊಡಗೆ ಅಪಾರ : ಶಾಸಕ ಬಿ.ಎನ್ ರವಿಕುಮಾರ್ ಬಣ್ಣನೆ 

ಶಿಡ್ಲಘಟ್ಟ: ಕಲಿಯುಗದಲ್ಲೂ ಅಲ್ಲದೆ ಇತರೆ ಯುಗಗಳಲ್ಲಿ ವಿಶ್ವಕರ್ಮ ಸಮಾಜ ಜಗತ್ತಿಗೆ ನೀಡಿರುವ ಕೊಡುಗೆ ಅಪಾರ ಎಂದು ಶಾಸಕ ಬಿ.ಎನ್ ರವಿಕುಮಾರ್ ಹೇಳಿದರು

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ  ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕರ್ಮ ಸಮುದಾಯ ಜಗತ್ತಿಗೆ ವಿಶ್ವ ಕಲೆ ಪರಿಚಯಿಸಿದ ಸಮಾಜ ವಾಗಿದ್ದು, ಇವರ ಕೈಚಳಕದಿಂದ ಅನಾದಿಕಾಲದಿಂದಲೂ ಗುಡಿ ಮಂದಿರ ಮಹಲ್ ಗಳನ್ನು ನಿರ್ಮಿಸಿ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುತ್ತಿದ್ದಾರೆ. ಈ ಸಮುದಾಯ ಸಾಮಾಜಿಕವಾಗಿ ಬಹಳಷ್ಟು ಹಿಂದುಳಿದಿದೆ. ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳಡಿ ಅರ್ಹ ಫಲಾನುಭವಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಿ ಅದರ ಸೌಲಭ್ಯಗಳನ್ನು ಪಡೆಯಬೇಕು ಎಂದರು.

ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದು,  ಕ್ಷೇತ್ರದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳ ಪರವಾಗಿ ಕೆಲಸ ಮಾಡುವೆ, ಈ ನಿಟ್ಟಿನಲ್ಲಿ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಮುಖಂಡರು ನನ್ನ ಗಮನಕ್ಕೆ ತಂದಲ್ಲಿ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ, ವಿಶ್ವಕರ್ಮ ಜಯಂತಿಯನ್ನು ಕಲ್ಕತ್ತಾದಲ್ಲಿ  ನಾವು ಗಣೇಶ ಹಬ್ಬವನ್ನು ಯಾವ ರೀತಿ ಆಚರಿಸುವಿರೋ ಅದೇ ರೀತಿ ಅಲ್ಲಿ ಅದ್ದೂರಿಯಾಗಿ ಆಚರಿಸುತ್ತಾರೆ. ಮುಂದಿನ ದಿನಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ, ಸರ್ಕಾರಿ ಕಚೇರಿಗಳಲ್ಲಿ ಆಚರಿಸುವಂತೆ ಕರೆ ನೀಡಿದರು.

ತಹಸೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಎಲ್ಲಾ ಸಮುದಾಯಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳು, ಯೋಜನೆಗಳನ್ನು ನೀಡಿದೆ, ಅದನ್ನು ಪಡೆಯುವುದರಲ್ಲಿ ತಪ್ಪಿಲ್ಲ, ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿ ನಿಮ್ಮ ಮಕ್ಕಳನ್ನು ಆಸ್ತಿ ಮಾಡಿದ್ದೆ ಆದಲ್ಲಿ ಎಲ್ಲಾ ಸೌಲಭ್ಯಗಳು ನಿಮ್ಮ ಮನೆ ಬಾಗಿಲಿಗೆ ಬರುತ್ತದೆ. ಎಷ್ಟೋ ಸಮಾಜದಲ್ಲಿ ವೃತ್ತಿ ಮೂಲ ಕಸುಬು ಆಗಿದೆ, ಅಪ್ಪ ಹಾಕಿದ ಆಲದ ಮರ ಎಂದು ತಂದೆ ತಾಯಿ ನಮ್ಮ ಪೂರ್ವಜರು ಮಾಡಿದ ಕುಲ ಕಸುಬನ್ನೇ ಆಧಾರಿತವಾಗಿ ಮಾಡಿಕೊಂಡು ಹೋಗುತ್ತಿದ್ದಾರೆ.  ಬೇರೆ ಬೇರೆ ರಂಗಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದು ಹೆಚ್ಚಿನ ಉನ್ನತ ಹುದ್ದೆಗಳನ್ನು ಅಲಂಕರಿಸಿ ಪಾಲಕರಿಗೆ ಮತ್ತು ಶಿಕ್ಷಕರಿಗೆ ಕೀರ್ತಿ ತರಬೇಕು ಎಂದರು.

ಪೋಷಕರು ಸಹ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತಯಾರಿ ಮಾಡಿಕೊಳ್ಳವ ಮೂಲಕ ಅನುವು ಮಾಡಿಕೊಕೊಟ್ಟು  ಅವರ ಭವಿಷ್ಯನ ಹೆಚ್ಚಿನ ಉನ್ನತ ಮಟ್ಟದಲ್ಲಿ ನೀವೇ ಅವರನ್ನು ಆಸ್ತಿಯನ್ನಾಗಿ ಮಾಡಿ ಆಗ ಮಾತ್ರ ಎಲ್ಲಾ ಸಮುದಾಯಗಳು ಮುಂದೆ ಬರುವುದಕ್ಕೆ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ  ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರನಾರಾಯಣಚಾರಿ, ಕಾಳಿಕಾಂಭ ಕಮಟೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಮುನಿರತ್ನಾಚಾರಿ, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಜನಾರ್ಧನ ಮೂರ್ತಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಬಂಕ್ ಮುನಿಯಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರ, ನಗರಸಭೆ ಪೌರಾಯುಕ್ತ ಮಂಜುನಾಥ್, ಪಿ.ಎಸ್.ಐ ವೇಣುಗೋಪಾಲ್, ಕಾರ್ಯದರ್ಶಿ ಶ್ರೀನಾಥ್ ನಿರ್ದೇಶಕರುಗಳಾದ ಸುಂದರ ಚಾರಿ, ಮಂಜುನಾಥ್, ಜಗದೀಶ್, ಮೋಹನ್, ರಾಘವೇಂದ್ರ, ಮಂಜುಳಾ ಜಗದೀಶ್, ಛಾಯಾ ರಮೇಶ್, ಜಗದೀಶ್ ಬಾಬು, ವಸಂತಚಾರಿ ಸೇರಿದಂತೆ ತಾಲ್ಲೂಕಿನ ಎಲ್ಲಾ ವಿಶ್ವಕರ್ಮ ಸಮಾಜದ ಕುಲಬಾಂಧವರು ಹಾಜರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!