Monday, December 23, 2024
Homeಜಿಲ್ಲೆಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ ಶಕ್ತಿ ಶಿಕ್ಷಕರಿಗೆ ಇದೆ: ಶಾಸಕ ಬಿ.ಎನ್ ರವಿಕುಮಾರ್ ಅಭಿಮತ.

ಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ ಶಕ್ತಿ ಶಿಕ್ಷಕರಿಗೆ ಇದೆ: ಶಾಸಕ ಬಿ.ಎನ್ ರವಿಕುಮಾರ್ ಅಭಿಮತ.

ಭಾರತ್ ರತ್ನ ಡಾ ಎಸ್. ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ.

ಶಿಡ್ಲಘಟ್ಟ:   ಜೀವನದಲ್ಲಿ ಯಾವುದೇ ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೆ ಬೆಳೆಯಬೇಕಾದರೆ ಮೊದಲು ತಂದೆ-ತಾಯಿ ಗುರುವಿಗೆ ಗೌರವ ನೀಡಬೇಕು.  ಮಕ್ಕಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ  ಶಕ್ತಿ ಶಿಕ್ಷಕರಿಗೆ ಇದೆ.  ಕ್ಷೇತ್ರದಲ್ಲಿ ನನ್ನ ಅಧಿಕಾರದ ಅವಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿದ್ದೇನೆ.  ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ ದೇವೇಗೌಡರು ನನಗೆ ಗುರುಗಳ ಸಮಾನರು, ಅವರು ಕೊಟ್ಟ ಅವಕಾಶ ಜನರ ಆಶಿರ್ವಾದದಿಂದ ನಾನು ಶಾಸಕನಾಗಿದ್ದೇನೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ ಶಿಕ್ಷಣಕ್ಕೆ ಅನುಧಾನ ಅಗತ್ಯವಿದೆಯೆಂದು  ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗಿದೆ. ಅನುಧಾನ ಬರುತ್ತದೆ ಎಂದು ಶಾಸಕ ಬಿ.ಎನ್ ರವಿಕುಮಾರ್ ಹೇಳಿದರು.

ನಗರದ ಹೊರ ವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ  ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಹಾಗೂ ಶಿಕ್ಷಣ ಇಲಾಖೆಯಿಂದ  ಆಯೋಜಿಸಿದ್ದ  ಭಾರತ ರತ್ನ ಡಾ.ಎಸ್. ರಾಧಾಕೃಷ್ಣ ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಈಗಾಗಲೇ ಶಿಕ್ಷಣ ಇಲಾಖೆಗೆ ಅಗತ್ಯವಿರುವ ಸರ್ಕಾರಿ ಶಾಲಾ ಕಟ್ಟಡಗಳು ಸೇರಿದಂತೆ ಇನ್ನಿತರೆ ಸೌಲಭ್ಯಗಳ ಕುರಿತು  ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು  ವರದಿಯನ್ನು ನೀಡಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಅನುಧಾನ ಬರುತ್ತದೆ. ಕ್ಷೇತ್ರದಲ್ಲಿ ಅಂಬೇಡ್ಕರ್ ಭವನ,  ಗುರುಭವನ,  ಸರ್ಕಾರಿ ನೌಕರರ ಭವನ , ಬೇಡಿಕೆ ಇದೆ. ಇದಕ್ಕೆ ಸಂಸದರ ಅನುಧಾನದಲ್ಲಿ  ಹೆಚ್ಚು ಒತ್ತು ನೀಡಬೇಕು ನಮ್ಮ ಅವಧಿಯಲ್ಲಿ ಗುದ್ದಲಿ ಪೂಜೆಯಾಗಿ ಭವನಗಳು ನಿರ್ಮಾಣವಾಗಬೇಕು ಎಂದು ವೇದಿಕೆಯಲ್ಲಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು ಅವರಿಗೆ ಮನವಿ ಮಾಡಿದರು. ಸರ್ಕಾರಿ ಶಾಲೆಗಳು ಅಭಿವೃದ್ದಿಯಾಗಬೇಕು ಅಪ್ಪೇಗೌಡನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆ ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ ವಿದ್ಯಾರ್ಥಿಗಳಿಗೆ ಬೇಕಾದ ಉತ್ತಮ ವಾತಾವರಣ ವ್ಯವಸ್ಥೆಯಿದೆ. ಅದೇ ಮಾದರಿಯಲ್ಲಿ ಸರ್ಕಾರಿ ಶಾಲೆಗಳು ಅಭಿವೃದ್ದಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದ ಎಂ. ಮಲ್ಲೇಶ್ ಬಾಬು ಅವರು ಮಾತನಾಡಿ ಜ್ಞಾನವೇ ನಮ್ಮ ಶಕ್ತಿ. ಜ್ಞಾನದಿಂದ ಎಲ್ಲಿ ಬೇಕಾದರೂ ಕೆಲಸ ಮಾಡಿ  ಜೀವನ ಮಾಡಬಹುದು.  ಶಿಕ್ಷಕರು ಹೆಚ್ಚಿನ ಜವಬ್ದಾರಿಯನ್ನು ತೆಗೆದುಕೊಂಡಿದ್ದು, ಇದರಿಂದ ಸ್ವಯಂ ತೃಪ್ತಿ ಇರುತ್ತದೆ. ವಿದ್ಯಾರ್ಥಿಗಳು   ಪೊಲೀಸ್, ಇಂಜನಿಯರ್, ಡಾಕ್ಟರ್  , ಐಎಎಸ್ ದೊಡ್ಡ ದೊಡ್ಡ ಹುದ್ದೆಗಳಿಗೆ ಹೋಗುವುದಕ್ಕೆ ಶಿಕ್ಷಕರ ಪಾತ್ರ ಪ್ರಮುಖವಾದದ್ದು,  ಕ್ಷೇತ್ರದ ಶಾಸಕರು ಹೇಳಿರುವ ಎಲ್ಲಾ ಕೆಲಸಗಳಿಗೆ ಅವರ ತೀರ್ಮಾನಕ್ಕೆ ಬಿಡುತ್ತೇನೆ. ಅವರು  ಹೇಳಿದಂತೆ ಕೆಲಸ ಮಾಡಿಕೊಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಹಾಗೂ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್, ಮತ್ತು ಸಂಸದ  ಎಂ. ಮಲ್ಲೇಶ್ ಬಾಬು ಅವರನ್ನ ಅಭಿನಂಧಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಉಪ ನಿರ್ದೇಶಕರಾದ ಪಿ ಬೈಲಾಂಜಪ್ಪ,  ತಹಶೀಲ್ದಾರ್ ಬಿ.ಎನ್ ಸ್ವಾಮಿ,   ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್,  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ  ಅಧಿಕಾರಿ ಹೇಮಾವತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ಎನ್ ಸುಬ್ಬಾರೆಡ್ಡಿ, ನಗರಸಭೆ ಅಧ್ಯಕ್ಷರಾದ ಎಂ.ವಿ ವೆಂಕಟಸ್ವಾಮಿ, ಉಪಾಧ್ಯಕ್ಷರಾದ ರೂಪನವೀನ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ,  ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಬಂಕ್ ಮುನಿಯಪ್ಪ, ತಾದೂರು ರಘು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!