ಶಿಡ್ಲಘಟ್ಟ : ನಗರ ಅಭಿವೃದ್ದಿಗೆ ಪ್ರಾಮಾಣಿಕವಾಗಿ ನಾನು ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದ ಜನ ಪ್ರಿಯ ನಾಯಕರು ಹಾಗೂ ಶಾಸಕರಾದ ಬಿ.ಎನ್ ರವಿಕುಮಾರ್ ರವರ ಮಾರ್ಗದರ್ಶನದಲ್ಲಿ ಅಭಿವೃದ್ದಿಗೆ ಆದ್ಯತೆ ನೀಡಿ ಹಾಗೂ ಜನರಿಗೆ ಮೂಲ ಭೂತ ಸೌಲಭ್ಯಗಳು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆಂದು ನಗರಸಭೆಯ ನೂತನ ಅಧ್ಯಕ್ಷರಾದ ಎಂ.ವಿ ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.
ನಗರ ಸಭೆಯ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಿದ್ದ, ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಅಧ್ಯಕ್ಷನಾಗಿ ಆಯ್ಕೆಯಾಗಲು ಪ್ರಮುಖವಾಗಿ ಶಾಸಕರ ಪಾತ್ರ ಮುಖ್ಯವಾಗಿದೆ. ಜೊತೆಗೆ ನಗರ ಸಭೆಯ ಸದಸ್ಯರ ಸಹಕಾರದಿಂದ ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಗರದ ಅಭಿವೃದ್ದಿಗೆ ಶ್ರಮಿಸುತ್ತೇನೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ನನಗೆ ಅವಕಾಶ ಕಲ್ಪಿಸಿಕೊಟ್ಟ ಎಲ್ಲರಿಗೂ ಅಭಾರಿಯಾಗಿದ್ದೇನೆ ಎಂದರು.
ನಗರಸಭೆ ನೂತನ ಉಪಾಧ್ಯಕ್ಷೆ ರೂಪ ನವೀನ್ ಮಾತನಾಡಿ, ನಗರ ಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಸೇರಿದಂತೆ ಮೂಲಭೂತ ಸಮಸ್ಯೆಗೆ ಮೊದಲ ಆದ್ಯತೆ ನೀಡುತ್ತೇವೆ. ನಗರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷರಾದ ಎಂ.ವಿ ವೆಂಕಟಸ್ವಾಮಿ ಮತ್ತು ಉಪಾಧ್ಯಕ್ಷರಾದ ರೂಪ ನವೀನ್ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಪೌರಾಯುಕ್ತ ಮಂಜುನಾಥ್ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು.
ನಗರಸಭೆಯ ಸದಸ್ಯರಿಂದ ನೂತನ ಅಧ್ಯಕ್ಷ – ಉಪಾಧ್ಯಕ್ಷರಿಗೆ ಹೂವು ಮಾಲೆ ಹಾಕಿ ಸಿಹಿಯನ್ನು ಹಂಚುವ ಮೂಲಕ ಸಂಭ್ರಮಿಸಿದರು. ಜೊತೆಗೆ ಪದಗ್ರಹಣದ ಪ್ರಯುಕ್ತ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.