ಚಿಕ್ಕಬಳ್ಳಾಪುರ : ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ “ಜೋಡಿ ಗ್ರಾಮಗಳ” ಪಹಣಿ ವಿತರಣಾ ಸಮಾರಂಭವನ್ನು ಸೆಪ್ಟೆಂಬರ್ 20 ರಂದು ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ರವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಉಪಸ್ಥಿತಿಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ರವರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತಿನ ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಡಿ.ಬೃಂದಾ ರವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ. ಮಂಜುನಾಥ, ಬೆಂಗಳೂರು ಕಂದಾಯ ಆಯುಕ್ತಾಲಯ, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ