ಶಿಡ್ಲಘಟ್ಟ: ಹುಬ್ಬಳಿಯ ಕಾಲೇಜು ಕ್ಯಾಂಪಸ್ ಆವರಣದಲ್ಲೆ ನೇಹಾ ಹಿರೇಮಠ್ ಎಂಬ ಹೆಣ್ಣು ಮಗಳನ್ನು ಬೀಕರವಾಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಸೋಮವಾರದಂದು ತಾಲ್ಲೂಕು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸೀಕಲ್ ಆನಂದ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮಯೂರ ವೃತ್ತದ ಬಳಿಯಿರುವ ಬಿಜೆಪಿ ಸೇವಾ ಸೌಧದಿಂದ ಹೊರಟು ಮಿನಿವಿಧಾನಸೌಧ ಮುಂಭಾಗದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ವಿರುದ್ದ ದಿಕ್ಕಾರದ ಘೋಷಣೆಗಳು ಕೂಗಿ ಪ್ರತಿಭಟಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ ಮಾತನಾಡಿ ಕಾಂಗ್ರೇಸ್ ಸರ್ಕಾರ ಕೇವಲ ಒಂದು ಸಮುದಾಯವನ್ನು ಒಲೈಕೆ ಮಾಡುತ್ತಿದೆ. ಇದೆಲ್ಲವೂ ಜನ ಗಮನಿಸುತ್ತಿದ್ದಾರೆ. ಕೊಲೆಯಾಗಿರುವ ಹೆಣ್ಣು ಮಗಳ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಆದರೆ ನಮ್ಮ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಟ ಸೌಜನ್ಯಕ್ಕಾದರೂ ಒಂದು ಕರೆ ಮಾಡಿ ಮಾತನಾಡುವ ಕೆಲಸ ಮಾಡಿರುವುದಿಲ್ಲ. ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಕಾನೂನು ಸುವ್ಯವಸ್ತೆ ಹದೆಗೆಟ್ಟಿದೆ. ಹೆಣ್ಣು ಮಗಳಿಗೆ ನ್ಯಾಯ ಸಿಗುವವರೆಗೂ ನಾವು ಇದನ್ನು ಬಿಡುವುದಿಲ್ಲ. ಬಿಜೆಪಿ ರಾಜ್ಯಧ್ಯಕ್ಷರಾದ ವಿಜಯೇಂದ್ರ ರವರ ಸೂಚನೆಯ ಮೇರೆಗೆ ಪ್ರತಿ ಭಟನೆಯನ್ನು ಮಾಡುತ್ತಿದ್ದೇವೆ. ಹಂತನಿಕೆಗೆ ಕಠಿಣ ಶಿಕ್ಷೆಯಾಗಬೇಕು . ಹೆಣ್ಣು ಮಕ್ಕಳಿಗೆ ಸಾರ್ವಜನಿಕವಾಗಿ ಗೌರವ ಸಿಗಬೇಕು ಒಂದು ಸಮುದಾಯವನ್ನು ಒಲೈಕೆ ಮಾಡುತ್ತಿರುವ ಕಾಂಗ್ರೇಸ್ ಸರ್ಕಾರ ಇನ್ನೆಷ್ಟು ದಿನಗಳು ಉಳಿಯುತ್ತದೆ ಗೊತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಬಿ.ಎನ್ ಸ್ವಾಮಿ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಮುಖಂಡರಾದ ಕಂಬದಹಳ್ಳಿ ಸುರೇಂದ್ರಗೌಡ, ತ್ರಿವೇಣಿ, ಶ್ರೀರಾಮ್, ಆಂಜನೇಯಪ್ಪ, ಸೇರಿದಂತೆ ನರೇಶ್, ದೇವರಾಜು, ಅಭಿ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.