ಶಿಡ್ಲಘಟ್ಟ : ತಾಲ್ಲೂಕಿನ ಸಾದಲಿ ಹೋಬಳಿಯ ಈ ತಿಮ್ಮಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಜನರು ಚಿಕಿತ್ಸೆ ಪಡೆಯಲು ಪರದಾಡುವಂತಾಗಿದೆ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಆದಷ್ಟು ಬೇಗ ವೈದ್ಯರನ್ನು ನಿಯೋಜಿಸಿ ಸಮಸ್ಯೆ ಪರಿಹರಿಸಬೇಕು ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪ್ರಭಾವಿ ಕಾಂಗ್ರೇಸ್ ಮುಖಂಡ ಪುಟ್ಟು ಆಂಜಿನಪ್ಪ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಬೇಟಿ ಮನವಿ ಸಲ್ಲಿಸಿದ್ದಾರೆ.
ಕ್ಷೇತ್ರದ ರಾಜಕಾರಣದಲ್ಲಿ ಅಧಿಕಾರದ ಗದ್ದುಗೆ ಏರಲು ಎರಡು ಅವಧಿಯಿಂದ ನಿರಂತರವಾಗಿ ಪ್ರಯತ್ನ ಮಾಡುತ್ತಾ ಕ್ಷೇತ್ರದಲ್ಲಿ ಜನರ ಬಳಿ ಉತ್ತಮ ವರ್ಚಸ್ಸು ಗಳಿಸಿ ನಿಕಟ ಜನ ಸಂಪರ್ಕ ಹೊಂದಿರುವ ಕಾಂಗ್ರೇಸ್ ಮುಖಂಡ ಪುಟ್ಟು ಆಂಜಿನಪ್ಪ ಭಾನುವಾರದಂದು ಅಜ್ಜಕದಿರೇನಹಳ್ಳಿ ಗೇಟ್ ಬಳಿಯಿರುವ ತಮ್ಮ ತೋಟದ ನಿವಾಸದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಗೆ ಔತಣಕೂಟ ಆಯೋಜಿಸಿದ್ದರು. ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಿ ಗೌತಮ್ ಸೇರಿದಂತೆ ಕಾರ್ಯಕರ್ತರು ಬೆಂಬಲಿಗರು ಭಾಗವಹಿಸಿದ್ದರು. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರೀ ನೂರಕ್ಕೆ ನೂರು ನಮ್ಮ ಅಭ್ಯರ್ಥಿ ಗೆಲ್ಲಲೇಬೇಕು ಗೆಲ್ಕುತ್ತಾರೆಂದು ಗಂಟಾ ಘೋಷವಾಗಿ ಕೂಗಿ ಹೇಳಿದ್ದಾರೆ.
ಕ್ಷೇತ್ರದಲ್ಲಿ ರಾಜಕೀಯ ಗುರಿಯನ್ನ ಸಾಧಿಸುವ ನಿಟ್ಟಿನಲ್ಲಿ ಜನರ ಕೆಲಸ ಕಾರ್ಯಗಳಿಗೆ ಸ್ಪಂಧಿಸುತ್ತಾ ಸ್ಥಳೀಯ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು ಸೇರಿದಂತೆ ಜನರ ಸಮಸ್ಯೆಗಳು ಬಗೆಹರಿಸುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದು, ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದಾಗಿ ಜೊತೆಗೆ ಸಾದಲಿ ಹೋಬಳಿ ಈ ತಿಮ್ಮಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಈ ಭಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ತ್ವರಿತವಾಗಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಚಿವರಿಗೆ ಮನವಿ ಮಾಡಲಾಗಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿರುವ ಸಚಿವರು: ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಇನ್ನೂ ರಾಜ್ಯದ ಆರೋಗ್ಯದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.