ಕಾಂಗ್ರೇಸ್ ಪಕ್ಷದ ಸಿದ್ದಾಂತಗಳಿಗೆ ಬದ್ದನಾಗಿ ಕೆಲಸ ಮಾಡುತ್ತೇನೆ.
ಬೆಂಗಳೂರು: ಬೆಂಗಳೂರಿನ ಕರ್ನಾಟಕ ಪ್ರದೇಶ್ ಕಾಂಗ್ರೇಸ್ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಸಚಿವ ಕೃಷ್ಣಬೈರೇಗೌಡ, ಸಚಿವ ಎಂ.ಸಿ ಸುಧಾಕರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಇಂದು ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಟ್ಟು ಆಂಜಿನಪ್ಪ ಅವರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುವ ಮೂಲಕ ತಮ್ಮದೇ ಆದ ವರ್ಚಸ್ಸು ಗಳಿಸಿ ಅಪಾರ ಬೆಂಬಲಿಗರನ್ನು ಹೊಂದಿದ್ದು, ಕಾಂಗ್ರೇಸ್ ಬೆಂಬಲಿತರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದ ಪುಟ್ಟು ಆಂಜಿನಪ್ಪಗೆ ಎರಡು ಬಾರಿಯಿಂದ ಟಿಕೇಟ್ ಕೈ ತಪ್ಪಿತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಟಿಕೇಟ್ ಸಿಗದೆ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತಿ ಹೆಚ್ಚು ಮತಗಳು ಗಳಿಸಿ ಎರಡನೇ ಸ್ಥಾನ ಗಳಿಸಿದರು. ಅಲ್ಪ ಮತಗಳಿಂದ ಸೋತಿದ್ದರು. ಆದರೂ ಸಹಾ ಕ್ಷೇತ್ರದಲ್ಲಿ ನಿರಂತರವಾಗಿ ರಾಜಕೀಯವಾಗಿ ತೊಡಗಿಸಿಕೊಂಡು ಮುಂದುವರೆಯುತ್ತಿದ್ದರು. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದು, ಪ್ರಸ್ತುತ ಲೋಕಸಭೆ ಚುನಾವಣೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂಸಿ. ಸುಧಾಕರ್, ಶಾಸಕ ಕೊತ್ತೂರು ಮಂಜುನಾಥ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ , ಸಚಿವ ಬೈರತಿ ಸುರೇಶ್, ಸೇರಿದಂತೆ ಕೃಷ್ಣಬೈರೇಗೌಡರ ಬೆಂಬಲ ಸಹಕಾರದಿಂದ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೇಸ್ ಪಕ್ಷಕ್ಕೆ ಸೇರ್ಪೆಡೆಯಾದ ಬಳಿಕ ಪುಟ್ಟು ಆಂಜಿನಪ್ಪ ಮಾತನಾಡಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯನ್ನು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಸರ್ಕಾರದ ಸೌಲಭ್ಯಗಳು ಪ್ರತಿ ಕುಟುಂಬಕ್ಕೂ ತಲುಪಿಸುವ ಕೆಲಸ ಮಾಡುತ್ತೇವೆ. ಪ್ರತಿ ಬೂತ್ ನಲ್ಲಿ ಮುನ್ನಡೆ ಕಾಯ್ದುಕೊಂಡು ಕೆಲಸ ಮಾಡುತ್ತೇವೆ. ಉಳುವವನಿಗೆ ಭೂಮಿ, ಹಸಿರು ಕ್ರಾಂತಿ, ದೇಶದಲ್ಲಿ ತಂತ್ರಜ್ಞಾನ, ಉದ್ಯೋಗವಕಾಶ ಇಂದಿರಾಗಾಂಧಿ, ಹಾಗೂ ರಾಜೀವ್ ಗಾಂಧಿಯವರ ಕೊಡುಗೆಯಿಂದ ದೇಶ ಆರ್ಥಿಕವಾಗಿ ಮೂರನೇ ಸ್ಥಾನದಲ್ಲಿ ಅಭಿವೃದ್ದಿ ಹೊಂದು ಹೊರ ಹೊಮ್ಮಿದೆ. ದೇಶಕ್ಕೆ ಕಾಂಗ್ರೇಸ್ ಪಕ್ಷದ ಕೊಡುಗೆ ಅಪಾರವಿದೆ. ಬಿಜೆಪಿ ಕೊಡುಗೆ ಶೂನ್ಯವಾಗಿದೆ ಎಂದು ತಿಳಿಸಿದರು.
ಕಾಂಗ್ರೇಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣಬೈರೇಗೌಡ,, ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ಸೇರಿದಂತೆ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಹಾಜರಿದ್ದರು.
ವರದಿ: ಕೋಟಹಳ್ಳಿ ಅನಿಲ್ ಕುಮಾರ್ ಕೆ.ಎ