ವಾರಣಾಸಿಯಿಂದ ಮೂರನೇ ಬಾರಿ ಮರು ಆಯ್ಕೆ ಬಯಸಿ ಉಮೇದುವಾರಿಕೆ.
ವಾರಾಣಸಿ: ದೇಶದಲ್ಲಿ ಚುನಾವರ್ಣೆ ಪರ್ವ ಲೋಕಸಭಾ ಚುನಾವಣೆಗೆ ಭರ್ಜರಿ ರಂಗು ಬಂದಿದ್ದು ವಾರಾಣಸಿಯಿಂದ ಮೂರನೇ ಬಾರಿ ಆಯ್ಕೆ ಬಯಸಿ ದೇಶದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಉಮೇದುವಾರಿಕೆ ಸಲ್ಲಿಸುವ ಮುನ್ನ ಮೋದಿಯವರು ದಶಾಶ್ವಮೇಧ ಘಾಟ್‌ನಲ್ಲಿ ಐವರು ವೈದಿಕ ಆಚಾರ್ಯರ ಸಮ್ಮುಖದಲ್ಲಿ ಗಂಗಾಮಾತೆಗೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಕಾಲ ಭೈರವೇಶ್ವರ ದೇವಸ್ಥಾನದತ್ತ ತೆರಳಿದರು, ಕಾಲಭೈರವ ದೇಗುಲವನ್ನು ತಲುಪಿ ಪ್ರಧಾನಿ ಮೋದಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಪ್ರಧಾನಮಂತ್ರಿಗಳ ಸೂಚಕರು ಬ್ರಾಹ್ಮಣ, ಒಬಿಸಿ ಮತ್ತು ದಲಿತ ವರ್ಗದವರಾಗಿದ್ದು, ಈ ಎಲ್ಲ ವರ್ಗದ ಮತದಾರರನ್ನು ಸೆಳೆಯುವ ಪ್ರಯತ್ನವಾಗಿಯೂ ನೋಡಲಾಗುತ್ತಿದೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಬ್ರಾಹ್ಮಣರು, 2.5 ಲಕ್ಷಕ್ಕೂ ಹೆಚ್ಚು ಒಬಿಸಿಗಳು, ಸುಮಾರು 1.25 ಲಕ್ಷ ದಲಿತ ಮತದಾರರಿದ್ದಾರೆ.
12 ರಾಜ್ಯಗಳ ಸಿಎಂಗಳು ಉಪಸ್ಥಿತಿ : ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸುವ ವೇಳೆ 12 ರಾಜ್ಯಗಳ ಸಿಎಂಗಳು ಸೇರಿದ್ದರು. ಇವರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮಧ್ಯ ಪ್ರದೇಶ ಮುಖ್ಯಮಂತ್ರಿ, ಮೋಹನ್ ಯಾದವ್, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ರಾಜಸ್ಥಾನ, ಅಸ್ಸಾಂ, ಹರಿಯಾಣ, ಗೋವಾ, ಸಿಕ್ಕೀಂ, ತ್ರಿಪುರಾ ಮುಖ್ಯ ಮಂತ್ರಿಗಳು ಸಹ ಭಾಗಿಯಾಗಿದ್ದರು. ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ನಾಯಕರು ಪ್ರಧಾನಿಯವರೊಂದಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿಹೊಂದಿದೆ. 2019ರಲ್ಲಿ 648 ಮತಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.
ಮೋದಿ ಬಳಿ 3.2 ಕೋಟಿ ರೂ. ಆಸ್ತಿ : ಪ್ರಧಾನಿ ನರೇಂದ್ರ ಮೋದಿ 3.2 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ ಮೋದಿ ತಮ್ಮ ಚರಾಸ್ತಿಯನ್ನು ಘೋಷಿಸಿದ್ದಾರೆ. ಅವರು 52,920 ರೂಪಾಯಿ ನಗದು ಹೊಂದಿದ್ದಾರೆ. ಜಮೀನು, ಮನೆ, ಕಾರು ಹೊಂದಿಲ್ಲ. ಮೋದಿ. ಯಾವುದೇ ಕಂಪನಿಯಲ್ಲಿ ಷೇರು ಖರೀದಿಸಿಲ್ಲ ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲ. 2018- 19 ರ ವರ್ಷದಲ್ಲಿ 11,14,230 ರೂ. ಆದಾಯವಿದ್ದರೆ 2022-23 ರಲ್ಲಿ ಇದು 23.56,080 ರೂ.ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ. ಗಾಂಧಿನಗರ, ವಾರಣಾಸಿ ಶಾಖೆಗಳಲ್ಲಿ 2,85,60,338 ರೂಪಾಯಿ ಫಿಕ್ಸೆಡ್ ಡೆಪಾಸಿಟ್ ಇಟ್ಟಿದ್ದಾರೆ. ಪ್ರಧಾನಿಯವರ ಬಣ 2,67,750 ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ. ಸರ್ಟಿಫಿಕೇಟ್‌ನಲ್ಲಿ 9,12,398 ರೂ. ಇದೆ ಎಂದು ಘೋಷಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಧಾನಿ ನರೇಂದ್ರ ಕೊಟ್ಬಾಲ್’ ಎಂದು ಪೂಜಿಸಲ್ಪಡುವ ಕಾಲಭೈರವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.