ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಚೊಕ್ಕಹಳ್ಳಿ ಗ್ರಾಮದ 20 ವರ್ಷದ ಅನುಶ್ರೀ ಎಂಬ ಯುವತಿ ಸೆಪ್ಟೆಂಬರ್ 30 ರಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ಬೀಗ ಹಾಕಿ ಚಪ್ಪಲಿ ಸ್ಟ್ಯಾಂಡಿನಲ್ಲಿ ಬೀಗದ ಕೀಲಿ ಇಟ್ಟು ಹೊರಟು ಹೋಗಿದ್ದು, ಅಕ್ಕ ಪಕ್ಕದ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಿದರೂ ಪತ್ತೆಯಾಗದ ಕಾರಣ ಕಾಣೆಯಾದ ನನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಅಶ್ವತ್ಥಪ್ಪ ರವರು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20 ವರ್ಷದ ಅನುಶ್ರೀ ಎಂಬ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರ ಪೊಲೀಸ್ ಠಾಣೆಗೆ ಹಾಗೂ ಚಿಕ್ಕಬಳ್ಳಾಪುರ ನಗರದ ಮಹಿಳಾ ಪೋಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪೊಲೀಸ್ ಸಬ್ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ