ಶಿಡ್ಲಘಟ್ಟ: ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎಸ್. ನಾರಾಯಣ ಅವರು (ಹೆಚ್ಚುವರಿ ಪ್ರಭಾರ) ಅಧಿಕಾರ ವಹಿಸಿಕೊಂಡಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದ ಮೇರೆಗೆ ಹೆಚ್ಚುವರಿ ಪ್ರಭಾರದ ಮೇರೆಗೆ ಸೋಮವಾರದಂದು ಅಧಿಕಾರ ವಹಿಸಿಕೊಂಡಿರುವುದಾಗಿ ತಿಳಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಅವರು ಕಛೇರಿಯಲ್ಲಿ ಸಿಬ್ಬಂದಿಯ ಕೊರೆತೆ ಇದೆ. ಎಲ್ಲವೂ ನಿಭಾಯಿಸಿಕೊಂಡು ಸರ್ಕಾರದ ಯೋಜನೆಗಳು ಗ್ರಾಮ ಪಂಚಾಯಿತಿಗಳ ಮುಖಾಂತರ ಪರಿಣಾಮಕಾರಿಯಾಗಿ ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೂಲ ಭೂತ ಸೌಲಭ್ಯಗಳು ಒದಗಿಸುವುದು ಸ್ವಚ್ಚತೆ, ಕುಡಿಯುವ ನೀರು, ಬೀದಿ ದೀಪ ನಿರ್ವಹಣೆಗೆ ಆದ್ಯತೆ ನೀಡಲಾಗುವುದು ಎಂದರು.