ಗೌರಿಬಿದನೂರು: ಪ್ರತಿಯೊಬ್ಬರು ನಿಮ್ಮ ಮನೆ ಹಾಗೂ ನಿಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಿಮ್ಮ ಗ್ರಾಮ ಸುಂದರವಾಗಿ ಕಾಣಲು ಸಾಧ್ಯ ಹಾಗಾಗಿ, ತಾವೆಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ ಅಂತಾ ಶ್ರೀ ವೆಂಕಟೇಶ್ವರ ಐಟಿಐ ಕಾಲೇಜಿನ ಅಧ್ಯಕ್ಷ ಜೆ ಲೋಕೇಶ್ ಹೇಳಿದರು.
ಗೌರಿಬಿದನೂರು ನಗರದ ಕಲ್ಲೂಡಿ ಗ್ರಾಮದಲ್ಲಿರುವ ಶ್ರೀ ವೆಂಕಟೇಶ್ವರ ಐಟಿಐ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವಿಧ್ಯಾರ್ಥಿಗಳು ಕಲ್ಲೂಡಿ ಗ್ರಾಮದಲ್ಲಿ ವಿವಿಧ ಮುಖ್ಯ ರಸ್ತೆಗಳಲ್ಲಿ ಸ್ವಚ್ಚತೆ ಮಾಡುವ ಮೂಲಕ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತಾ ಹಿ ಸೇವಾ ಜನಾಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ವರ್ಷ ಸ್ವಚ್ಛ ಭಾರತ ಅಭಿಯಾನದ 10 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗೌರಿಬಿದನೂರು ತಾಲ್ಲೂಕಿನಲ್ಲಿ ಅಕ್ಟೋಬರ್ 2 , ರವರಗೆ ಆಚರಿಸಲಾಗುತ್ತಿದ್ದು ಜೊತೆಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಮಹಾತ್ಮಾ ಗಾಂಧೀಜಿ ಅವರು ಗ್ರಾಮ ಸ್ವರಾಜ್ಯದ ಮೂಲಕ ಹಳ್ಳಿಗಳ ಬೆಳವಣಿಗೆಗೆ ವಿಶೇಷ ಆಸಕ್ತಿ ಹೊಂದಿದ್ದರು. ದೇಶವನ್ನು ಎಲ್ಲಾ ರೀತಿಯಲ್ಲಿ ಸ್ವಚ್ಛವಾಗಿಡಲು ಅತ್ಯಂತ ಕಳಕಳಿ ಹೊಂದಿದ್ದರು ಈ ಹಿನ್ನೆಲೆ ಅವರಿಗೆ ಗ್ರಾಮವನ್ನು ಸ್ವಚ್ಚವಾಗಿಸುವ ಮೂಲ ಜನನ ಗೌರವ ಸಲ್ಲಿಸುವ ಕೆಲಸ ಮಾಡೋಣ ಎಂದರು..
ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನಾಗಮಣಿ ರವರು ಸ್ವಚ್ಛತಾ ಹಿ ಸೇವಾ” ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಮಕ್ಕಳ ಜೊತೆಗೂಡಿ ಗ್ರಾಮದ ಬೀದಿ ಬೀದಿಗಳಲ್ಲಿ ರ್ಯಾಲಿ ಮಾಡುವ ಮೂಲಕ ಜನರಲ್ಲಿ ವಿಶೇಷ ಜಾಗೃತಿ ಮೂಡಿಸಲಾಯಿತು..
ಇದೇ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಪೃಥ್ವಿ,ಕಿರಿಯ ತರಭೇತಿ ಅಧಿಕಾರಿಗಳಾದ ಜಮೀರಾ ಎಸ್, ಅರುಣಾ ಪಿ ಸರ್ಕಾರಿ ಶಾಲೆಯ ಶಿಕ್ಷಕರಾದ ರಾಮಲಕ್ಷ್ಮಮ್ಮ, ಅಜಯ್ ಕುಮಾರ್, ಅಶಾ ಕಾರ್ಯಕರ್ತರಾದ ಪದ್ಮಾ,ಅಶಾ ,ಕಲ್ಲಂತರಾಯ ದೇವಸ್ಥಾನದ ಪ್ರಧಾನ ಅರ್ಚಕರಾದ ಕಲ್ಯಾಣ್ ಹಾಗೂ ವಿಧ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.