Monday, December 23, 2024
Homeಜಿಲ್ಲೆಕನ್ನಡ ಜ್ಯೋತಿ ರಥ ಸ್ವಾಗತಕ್ಕೆ ಸಕಲ ಸಿದ್ದತೆ. ತಹಶೀಲ್ದಾರ್ ಬಿ.ಎನ್ ಸ್ವಾಮಿ.

ಕನ್ನಡ ಜ್ಯೋತಿ ರಥ ಸ್ವಾಗತಕ್ಕೆ ಸಕಲ ಸಿದ್ದತೆ. ತಹಶೀಲ್ದಾರ್ ಬಿ.ಎನ್ ಸ್ವಾಮಿ.

ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆ.

ಶಿಡ್ಲಘಟ್ಟ : ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ – ಸಂಭ್ರಮ – 50, “ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ” ಎಂಬ ವಿಶೇಷ ಘೋಷವಾಕ್ಯದೊಂದಿಗೆ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ್ದು, ತಾಲ್ಲೂಕಿಗೆ ಜುಲೈ 29 ಸೋಮವಾರದಂದು ಆಗಮಿಸಲಿರುವ ರಥವನ್ನ ಬರಮಾಡಿಕೊಳ್ಳಲು ತಾಲ್ಲೂಕು ಆಡಳಿತದಿಂದ ಸಕಲ ಸಿದ್ದತೆಗಳು ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಬಿ.ಎನ್ ಸ್ವಾಮಿ ತಿಳಿಸಿದರು.

ತಾಲ್ಲೂಕಿನ ಶಕ್ತಿ ಕೇಂದ್ರದ ಮೊದಲನೇ ಮಹಡಿಯ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಪೂರ್ವಬಾವಿ ಸಭೆ ನಡೆಸಿ ಮಾತನಾಡಿದರು.

ಕರ್ನಾಟಕ ಭಾಷೆ , ಜಲ, ಸಂಸ್ಕೃತಿಯ ಆಚರಣೆ, ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದಂತಹ ಮಹನೀಯರನ್ನ ಸ್ಮರಿಸಿ ಅವರ ಸಾಧನೆಗಳು ಜನರಿಗೆ ತಿಳಿಸುವ ಆ ನಿಟ್ಟಿನಲ್ಲಿ ತಾಲ್ಲೂಕು ಆಡಳಿತದಿಂದ ಶಾಸಕರ ಅಧ್ಯಕ್ಷತೆಯಲ್ಲಿ ಸಕಲ ಸಿದ್ದತೆಗಳು ಮಾಡಿಕೊಳ್ಳಲಾಗಿದೆ ತಾಲ್ಲೂಕಿನ ಹಂಡಿಗನಾಳದ ಬಳಿ ರಥವನ್ನು ಸ್ವಾಗತ ಮಾಡಿಕೊಂಡು ನಗರದ ಪ್ರಮುಖ ಬೀದಿಗಳಲ್ಲಿ‌ ಸಂಚರಿಸಲಿದೆ. ಬಳಿಕ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಯ ಬಳಿ ಗೌರವ ಸಮಪರ್ಣೆ ಮಾಡಲಾಗುವುದು. ಅಂದು ಸರ್ಕಾರಿ ಶಾಲೆಯ ಬಳಿ ರಥ ಉಳಿದುಕೊಳ್ಳಲಿದೆ. ಸರ್ಕಾರಿ ಶಾಲಾ – ಕಾಲೇಜು ವಿದ್ಯಾರ್ಥಿಗಳು ಸಹ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಕನ್ನಡದ ಪರಂಪರೆಯನ್ನ ಜನರಿಗೆ ತಿಳಿಸುವ ಮೂಲಕ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ಇದೇ ಪೂರ್ವಭಾವಿ ಸಭೆಯಲ್ಲಿ ಸಮಯ, ಸಂದರ್ಭವನ್ನ ಉಪಯೋಗಿಸಿಕೊಂಡು ತಾಲ್ಲೂಕು ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಯಿತು. ಸದ್ಯದ ವಾತಾವರಣದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತ ಕ್ರಮಗಳು ಪಾಲಿಸುವಂತೆ ಹಾಗೂ ಪ್ರತಿ ಶುಕ್ರವಾರ ಒಣ ದಿವಸ ಆಚರಿಸುವಂತೆ ಅಂದರೆ ಶೇಖರಣೆ ಮಾಡಿಕೊಂಡಿರುವ ನೀರನ್ನು ಚೆಲ್ಲಿ ಡ್ರಮ್, ಟ್ಯಾಂಕ್ ನ್ನು ಸ್ವಚ್ಚಗೊಳಿಸಿ ಒಣಗಿಸಿ ಒಂದು ದಿವಸದ ನಂತರ ಹೊಸ ನೀರನ್ನ ಶೇಕರಣೆ ಮಾಡಿಕೊಂಡು ಬಳಕೆ ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನ ಸ್ವಚ್ಚತೆಯಿಂದ ಕಾಪಾಡಿಕೊಳ್ಳಬೇಕು. ಜ್ವರ ಕಾಣಸಿಕೊಂಡರೆ ನಿರ್ಲಕ್ಷಿಸದೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಡೆಂಗ್ಯೂ ಜ್ವರದಿಂದ ಯಾವುದೇ ಅತಂಕ ಪಡುವ ಅಗತ್ಯವಿಲ್ಲ. ಹೆಚ್ಚು ನೀರನ್ನ ಕುಡಿಯಬೇಕು ಪ್ರತ್ಯೇಕ ಚಿಕಿತ್ಸೆಯ ಅಗತ್ಯವೇನು ಇರುವುದಿಲ್ಲ. ಜ್ವರಕ್ಕೆ ನೀಡುವ ಔಷದಿಗಳಿಂದಲೇ ಡೆಂಗ್ಯೂ ಗುಣಮುಖವಾಗಲಿದೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಚ್ಚರ ವಿರಲಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮೂರ್ತಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಂಜುನಾಥ, ಗ್ರೇಡ್ – 2 ತಹಶೀಲ್ದಾರ್ ಪೂರ್ಣಿಮಾ, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ದೇವರಾಜ್, ನಗರ ಪೊಲೀಸ್ ಠಾಣೆ ಪಿಎಸ್ ಐ ವೇಣುಗೋಪಾಲ್, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರಾದ ಪಟೇಲ್ ನಾರಾಯಣಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

ವರದಿ: ಕೋಟಹಳ್ಳಿ ಅನಿಲ್ ಕುಮಾರ್ ಕೆ.ಎ 

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!