Tuesday, December 24, 2024
Homeಜಿಲ್ಲೆಅವಕಾಶಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು: ತಹಶೀಲ್ದಾರ್ ಬಿ.ಎನ್ ಸ್ವಾಮಿ 

ಅವಕಾಶಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು: ತಹಶೀಲ್ದಾರ್ ಬಿ.ಎನ್ ಸ್ವಾಮಿ 

ಡಾ ಬಾಬು ಜಗಜೀವನ್ ರಾಂ ರವರ 117 ನೇ ಜಯಂತೋತ್ಸವ ಸರಳ ಆಚರಣೆ. 

ಶಿಡ್ಲಘಟ್ಟ:  ಸ್ವಾತಂತ್ರ್ಯದ ನಂತರ ಸಂವಿಧಾನದ ಮೂಲಕ ನಿಜವಾದ ಸ್ವಾತಂತ್ರ್ಯವನ್ನು ಬಾಬಾ ಸಾಹೇಬ್ ಡಾ.ಬಿ. ಆರ್ ಅಂಬೇಡ್ಕರ್ ಅವರು ನೀಡಿದ್ದಾರೆ. ಎಲ್ಲಾ ಸಮುದಾಯಗಳಿವೆ ಸಂವಿಧಾನ ಮೀಸಲಾತಿ ನೀಡಿದೆ. ಪ್ರತಿಯೊಬ್ಬರೂ ಇರುವಂತಹ ಅವಕಾಶಗಳನ್ನ ಸದ್ಬಳಕೆ ಮಾಡಿಕೊಂಡಾಗ ಜೀವನದಲ್ಲಿ ಮೇಲೆ ಬರುವುದಕ್ಕೆ ಸಾಧ್ಯವಾಗುತ್ತದೆ. ಬಾಬು ಜಗಜೀವನ್ ರಾಂ ರವರ ಸಾಧನೆ ನಮ್ಮೆಲ್ಲರಿಗೂ ಮಾರ್ಗದರ್ಶನ ಆದರ್ಶವಾಗಬೇಕು. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಬೇಕು. ಜೊತೆಗೆ ನಾವು ಮಾಡುವ ಒಳ್ಳೆಯ ಕೆಲಸಗಳು ನಮ್ಮ ಮಕ್ಕಳಿಗೆ  ಮುಂದಿನ ಪಿಳೀಗೆಗೆ  ಆದರ್ಶವಾಗಬೇಕು ಎಂದು ತಹಶೀಲ್ದಾರ್ ಬಿ.ಎನ್ . ಸ್ವಾಮಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿ  ಹಾಗೂ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ  ಹಮ್ಮಿಕೊಂಡಿದ್ದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ  ಡಾ. ಬಾಬು ಜಗಜೀವನ್ ರಾಂ  ರವರ 117ನೇ ಜಯಂತಿಯ ಪ್ರಯುಕ್ತ ಭಾವ ಚಿತ್ರವಿಟ್ಟು ಪುಷ್ಪಮಾಲೆ ಹಾಕಿ ಪೂಜೆ ಸಲ್ಲಿಸುವ ಮೂಲಕ  2024 ರ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಜಯಂತೋತ್ಸವ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಎನ್ ಸುಬ್ಬಾರೆಡ್ಡಿ,  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ಕೋಟಹಳ್ಳಿ ಅನಿಲ್‌ ಕುಮಾರ್‌ ಕೆ.ಎ 

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!