ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಲಾಗಿದೆ.
ಕಿಡ್ನಾಪ್ ಪ್ರಕರಣದಲ್ಲಿ ಹೆಚ್ .ಡಿ.ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‌ಐಆರ್ ಸಹಾ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ಎರಡು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮುಖಾಂತರ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಬುಧವಾರ (ಇಂದು) ಬೆಳಗ್ಗೆ 11 ಗಂಟೆಗೆ ಮುಂದೂಡಿದೆ. ಇಂದು ನ್ಯಾಯಾಲಯವು ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಜಾಮೀನು ಸಿಗುತ್ತೋ ಇಲ್ಲವೋ ಕಾದುನೋಡಬೇಕಿದೆ.