Monday, December 23, 2024
Homeರಾಜಕೀಯಗ್ಯಾರಂಟಿ ಜತೆಗೆ ಅಭಿವೃದ್ಧಿಗೂ ಹಣ ಮೀಸಲು ಅಪ ಪ್ರಚಾರ ಮಧ್ಯೆ ಗ್ಯಾರಂಟಿ ಯಶಸ್ವಿ ಅನುಷ್ಠಾನ:...

ಗ್ಯಾರಂಟಿ ಜತೆಗೆ ಅಭಿವೃದ್ಧಿಗೂ ಹಣ ಮೀಸಲು ಅಪ ಪ್ರಚಾರ ಮಧ್ಯೆ ಗ್ಯಾರಂಟಿ ಯಶಸ್ವಿ ಅನುಷ್ಠಾನ: ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ವಿಜಯೇಂದ್ರ, ಆರ್.ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ, ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 2టి ఏట చూడువుదాగి ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ನೀರಾವರಿಗೆ 16360 ಕೋಟಿ ರೂ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ.

ಲೋಕೊಪಯೋಗಿ‌ ಇಲಾಖೆಗೂ 9661 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆ ಲ್ಲಾ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ, ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.

ಹಿಂದುಳಿದವರ ಮೀಸಲಾತಿ ಮುಸ್ಲಿಮರಿಗೆ ಕೊಡುತ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು ಎಂದು ವಾಗ್ದಾಳಿ ಮಾಡಿದರು

ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲಿಮರ ಮೀಸಲಾತಿ ರದ್ದು ಮಾಡುವುದಿಲ್ಲ. ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ.ಮೀಸಲಾತಿಯನ್ನ ಯಾರೂ ಕಿತ್ತುಕೊಂಡಿಲ್ಲ. ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ,ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ. ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ‘ಕಲ್ಯಾಣ, ಕೃಷಿ ಸೇಲ ಎಲ್ಲ ಇಲಾಖೆಗಳಲ್ಲೂ ಕೆಲಸಗಳು ಯಥೇಚ್ಛವಾಗಿ ನಡೆಯುತ್ತಿವೆ ಎಂದು ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ತಿಳಿಸಿದರು.

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ, ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದ್ದರು ಎಂದು ಅವರು ದೂರಿದರು.

ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಜಾತೆಗೆ ಹಣ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಟುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆ ಮುಂದುವರೆಸಿದ್ದೇವೆ ಎಂದು ತಿಳಿಸಿದರು.

ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು.

ಸಂಪುಟ ಪುನಾರಚನೆ ಇಲ್ಲ : ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆದ್ರೆ ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗರಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯವರಂತೆ 28 ಗೆಲ್ತಿವಿ ಅಂತ ನಾನು ಹೇಳುವುದಿಲ್ಲ ಎಂದು ತಿರುಗೇಟು ಕೊಟ್ಟರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!