ಗೌರಿಬಿದನೂರು: ತಾಲೂಕಿನ ತೊಂಡೇಭಾವಿ ಪಂಚಾಯತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ, ಮಾನದಂಡದಂತೆ ಅಂತಿಮವಾಗಿ 150 ಅಂಕಗಳ ಪ್ರಶ್ನಾಂಕಗಳ ಆಧಾರದ ಮೇಲೆ ತೊಂಡೇಭಾವಿ ಗ್ರಾಮ ಪಂಚಾಯತಿ ಪ್ರಶಸ್ತಿ ಪಡೆದಿದೆ.
ಇನ್ನು 15 ನೇ ಹಣಕಾಸು ಆಯೋಗದ ಅನುದಾನ ಬಳಕೆ, ಎಸ್ಸಿ-ಎಸ್ಟಿ ಸಮುದಾಯಗಳ ಕಲ್ಯಾಣ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ದಿನಗೂಲಿ ಮತ್ತು ಕಾರ್ಡ್ಗಳ ವಿತರಣೆ, ಸಂಜೀವಿನಿ ಶೆಡ್ಗಳ ನಿರ್ಮಾಣ, ಶಾಲಾ ಉದ್ಯಾನವನ ನಿರ್ವಹಣೆಯ ಯಶಸ್ವಿಯಾಗಿ ನಡೆಸಲಾಗಿದೆ ಎಂದು ನಿಕಟಪೂರ್ವ ಅಧ್ಯಕ್ಷ ಜೆ ಕಾಂತರಾಜ್ ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲು ಪ್ರಶಸ್ತಿ ಪ್ರೇರಣೆ ನೀಡಿದೆ ಎಂದು ತೊಂಡೇಭಾವಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜು ಬಳೂಟಗಿ ಹೇಳಿದರು.
ಇನ್ನು ಇದೇ ವೇಳೆ ಪಂಚಾಯತಿ ಅಧ್ಯಕ್ಷೆ ಕಾಮಾಕ್ಷಿ ರಾಮದಾಸ್ ರವರು ಮಾತನಾಡಿ ‘ಪ್ರಸಕ್ತ ಸಾಲಿನಲ್ಲಿ ಕುಡಿಯುವ ನೀರಿನ ಸೌಲಭ್ಯ, ನೈರ್ಮಲ್ಯ, ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ಈ ಶ್ರೇಯಸ್ಸು ಪಂಚಾಯತಿ ಸಿಬ್ಬಂದಿ ಹಾಗೂ ಗ್ರಾಮದ ಜನರ ಶ್ರಮಕ್ಕೆ ಸಲ್ಲುತ್ತದೆ ಎಂದರು.
ಇನ್ನು ಇದೇ ವೇಳೆ ಪಂಚಾಯತಿ ಉಪಾಧ್ಯಕ್ಷ ಜಯಚಂದ್ರ ರೆಡ್ಡಿ ಮಾತನಾಡಿ ‘ಗ್ರಾಮ ಪಂಚಾಯತಿ ವತಿಯಿಂದ ಪ್ರತಿ ಮನೆ ಹಾಗೂ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಾಣ, ಘನತ್ಯಾಜ್ಯ ನಿರ್ವಹಣಾ ಘಟಕ ಸೇರಿದಂತೆ ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡಣೆ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು
ಪ್ರಶಸ್ತಿ ಪ್ರದಾನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬುಧವಾರ (ಅ.2) ಗಾಂಧಿಜಯಂತಿಯಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳಿಗೆ ರೂ 5 ಲಕ್ಷ ಚೆಕ್, ಪಾರಿತೋಷಕ ಹಾಗೂ ಅಭಿನಂದನಾ ಪತ್ರ ನೀಡಿ ಪುರಸ್ಕರಿಸಲಾಗುತ್ತದೆ.ತೊಂಡೇಭಾವಿ ಗ್ರಾಮ ಪಂಚಾಯಿತಿ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಇತರೆ ಗ್ರಾ.ಪಂಗಳಿಗೆ ಸ್ಪೂರ್ತಿ: ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿರುವ ಗ್ರಾಮ ಪಂಚಾತಿಗಳನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವುದರಿಂದ ಪಂಚಾಯಿತಿಗಳ ನಡುವೆ ಪೈಪೋಟಿ ಹೆಚ್ಚುತ್ತದೆ. ಇದರಿಂದ ಪಂಚಾಯಿತಿಯಿಂದ ಅಭಿವೃದ್ಧಿಯ ಕಾರ್ಯಕ್ರಮಗಳ ಕಡೆ ಗಮನಹರಿಸಲು ಸಹಕಾರಿಯಾಗುತ್ತದೆ. ಅಧಿಕಾರಿಗಳ ಮತ್ತು ಚುನಾಯಿತ ಆಡಳಿತ ಮಂಡಳಿ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಪಂಚಾಯಿತಿಗಳು ಉತ್ತಮ ಕೆಲಸ ಮಾಡಲು ಸ್ಪೂರ್ತಿ ಸಿಕ್ಕದಂತಾಗಿದೆ. – ಹೊನ್ನಯ್ಯ ಜಿ.ಕೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ. ಗೌರಿಬಿದನೂರು.