Monday, December 23, 2024
Homeದೇಶಹರಿಯಾಣ ವಿಧಾನಸಭಾ ಚುನಾವಣೆ: ವಿನೇಶ್ ಫೋಗಟ್‌ಗೆ ಗೆಲುವು.

ಹರಿಯಾಣ ವಿಧಾನಸಭಾ ಚುನಾವಣೆ: ವಿನೇಶ್ ಫೋಗಟ್‌ಗೆ ಗೆಲುವು.

ನವದೆಹಲಿ: ಸತ್ಯಕ್ಕೆ ಜಯವಾಗಿದೆ ಎಂದು ಹರಿಯಾಣವಿಧಾನಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವು ಸಾಧಿಸಿದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್ ಸಂತಸ ವ್ಯಕ್ತಪಡಿಸಿದ್ದಾರೆ. ಹರಿಯಾಣ ಚುನಾವಣೆಯ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು.

ಒಲಿಂಪಿಕ್ಸ್‌ನಲ್ಲಿ ಅನರ್ಹಗೊಳ್ಳುವ ಮೂಲಕ ಸೋಲನ್ನು ಅನುಭವಿಸಿದ್ದರು. ಇದಾದ ಬಳಿಕ ಸೆ.4 ರಂದು ಕಾಂಗ್ರೆಸ್‌ಗೆ ಸೇರಿಕೊಂಡ ವಿನೇಶ್ ಚುನಾವಣಾ ಕುಸ್ತಿಯಲ್ಲಿ ತನ್ನ ಚೊಚ್ಚಲ ಗೆಲುವನ್ನು ಸಾಧಿಸಿದ್ದಾರೆ. ವಿನೇಶ್ ಮಾತನಾಡಿ, ನಾನು ಹೊಸ ಪ್ರಾರಂಭಿಸುತ್ತಿದ್ದೇನೆ. ನಾನು ನನ್ನ ಕ್ರೀಡಾ ಜೀವನದಲ್ಲಿ ಅನುಭವಿಸಿದ ನೋವನ್ನು ಬೇರೆ ಕ್ರೀಡಾಪಟುಗಳು ಅನುಭವಿಸುವುದು ಬೇಡ ಎಂದು ಬಯಸುತ್ತೇನೆ ಎಂದರು. ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ ಮಾತ್ರ ನಮ್ಮ ಜೊತೆ ಯಾರು ನಿಂತಿದ್ದಾರೆ ಎಂದು ಗೊತ್ತಾಗುತ್ತದೆ. ಬಿಜೆಪಿ ಪಕ್ಷವನ್ನು ಹೊರತುಪಡಿಸಿ ಇತರ ಎಲ್ಲಾ ಪಕ್ಷಗಳು ನನ್ನ ನೋವನ್ನು ಹಾಗೂ ನನ್ನ ಕಣ್ಣೀರನ್ನು ಅರ್ಥ ಮಾಡಿಕೊಂಡಿದ್ದವು ಎಂದು ತಿಳಿಸಿದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!