ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅರಿವು ಕಾರ್ಯಕ್ರಮ.
ಶಿಡ್ಲಘಟ್ಟ : ಪ್ರಜಾಪ್ರಭುತ್ವದ ಹಬ್ಬವೇ ಚುನಾವಣೆ ಲೋಕಸಭಾ ಚುನಾವಣೆ ಹಿನ್ನೆಲೆ ಅಧಿಕಾರಿಗಳು ಚುನಾವಣೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡು ನಾಗರೀಕರಿಗೆ ಮತದಾನದ ಕುರಿತು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಅವರ ನೇತೃತ್ವದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.
ನಗರದ ಬಸ್ ನಿಲ್ದಾಣ ಹಾಗೂ ಕೋಟೆ ವೃತ್ತದಲ್ಲಿ ಗಿಡಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಭಾರತ ದೇಶದ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯೂ ಮತದಾನ ಹಕ್ಕು ಚಲಾಯಿಸಬೇಕು. ಆಮೂಲಕ ತಮಗೆ ಬೇಕಾದ ಜನಪ್ರತಿನಿಧಿಗಳನ್ನ ಆಯ್ಕೆ ಮಾಡಿ ದೇಶದ ಅಭಿವೃದ್ದಿ ಕೈಜೋಡಿಸಬೇಕು. ಯಾರೂ ಕೂಡ ಮತದಾನದಿಂದ ವಂಚಿತರಾಗಬಾರದು. ಸಂವಿಧಾನ ಮತದಾನ ಹಕ್ಕು ಕಲ್ಪಿಸಿದೆ ನಾಗರೀಕರಾಗಿ ಮತ ಚಲಾಯಿಸುವುದು ನಮ್ಮ ಜವಬ್ದಾರಿಯಾಗಿದೆ. ಪ್ರತಿಯೊಬ್ಬರಿಗೂ ಚುನಾವಣೆ, ಮತದಾನದ ಬಗ್ಗೆ ಅರಿವಿರಬೇಕು. ದೇಶದ ಅಭಿವೃದ್ದಿಗಾಗಿ ಎಲ್ಲರೂ ಹೆಚ್ಚಿನ ಶ್ರಮವಹಿಸಬೇಕು ಎಂದರು.
ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಮತದಾನವಾಗಬೇಕು ಹಾಗಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸಮಾಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೇ ಮತಚಲಾಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಡಿಪಿಓ ನೌತಾಜ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ನಾಗಾರ್ಜುನ, ಪೌರಾಯಕ್ತ ರಂಗನಾಥರೆಡ್ಡಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.