Monday, December 23, 2024
Homeಜಿಲ್ಲೆಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನ ಆಚರಣೆ.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನ ಆಚರಣೆ.

ಶಿಡ್ಲಘಟ್ಟ : ನಮ್ಮ ಭಾರತ ದೇಶವು ವಿಶ್ವದಲ್ಲಿಯೇ ಅತಿ ಹೆಚ್ಚು ತಂಬಾಕು ಉಪಯೋಗಿಸುವ ದೇಶವಾಗಿದೆ ಅಲ್ಲದೆ ಈ ತಂಬಾಕಿನ ಬಳಕೆ ಹೆಚ್ಚಾಗಿದೆ ಈ ತಂಬಾಕಿನ ಬಳಕೆಯಿಂದ ಮಾರಕ ಕ್ಯಾನ್ಸರ್‌ಗಳು ಉಂಟಾಗುತ್ತವೆ ಹಾಗೂ ತಂಬಾಕು ಉಪಯೋಗದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದರ ಪೂರಕವಾಗಿ ರಾಜ್ಯದಂತ ಪೂಜ್ಯ ಡಾ| ಡಿ.ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 500 ಕ್ಕೂ ಕಡೆ ಈ ಕಾರ್ಯಕ್ರಮವನ್ನು ಶಾಲಾ ಕಾಲೇಜುಗಳಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ.ಎಸ್ ಅವರು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಬಶೆಟ್ಟಿಹಳ್ಳಿಯ ಅಂಬೇಡ್ಕರ್ ಭವನದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡುತ್ತಿದ್ದರು.

ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಶ್ಯಾಮಲಾ ವಿನೋದ್ ಅವರು ಮಾತನಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಲಕ ದುಶ್ಚಟಗಳ ವಿರುದ್ಧ ಜನರಿಗೆ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಈ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ಪೋಷಕರು ವಹಿಸಿಕೊಂಡು ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯರಾದ ತ್ಯಾಗರಾಜ್ ರವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಪ್ರತೀ ವರ್ಷವು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನ ಆಚರಣೆ ಮತ್ತು ಮದ್ಯವರ್ಜನ ಶಿಬಿರ ಮುಂತಾದ ಕಾರ್ಯಕ್ರಮಗಳ ಮೂಲಕ ಹದಿ ಹರೆಯದವರಲ್ಲಿ, ಯುವಕರಲ್ಲಿ ಹಾಗೂ ಇತರರಲ್ಲಿ ದುಷ್ಟಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಸುರೇಶ್ ಗೌಡ ಎಸ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಅರುಣಾ, ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!