Thursday, January 16, 2025
Homeಜಿಲ್ಲೆಯುವನಿಧಿ ವಿಶೇಷ ನೋಂದಣಿ ಅಭಿಯಾನ.

ಯುವನಿಧಿ ವಿಶೇಷ ನೋಂದಣಿ ಅಭಿಯಾನ.

‘ಸಂವಿಧಾನ ಶಕ್ತಿ ನ್ಯೂಸ್ ‘  ಚಿಕ್ಕಬಳ್ಳಾಪುರ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಯುವ ಜನತೆಯ ಉಜ್ಜಲ ಭವಿಷ್ಯಕ್ಕಾಗಿ 2024ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುತ್ತದೆ. ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, 2025ರ ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಥವಾ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳುವುದು. ಅರ್ಹ ಅಭ್ಯರ್ಥಿಯು ಪ್ರತಿ ಮಾಹೆ 25 ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು. ಜಿಲ್ಲೆಯ ಎಲ್ಲಾ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800-599-7154 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ಪೋಸ್ಟರ್ ಬಿಡುಗಡೆ ಮಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಹಾಗೂ ಕಚೇರಿ ಸಿಬ್ಬಂದಿ ಇದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!